ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಪೊಲೀಸ್ ಆಯುಕ್ತರಾಗಿ, ಹೆಚ್ಚುವರಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ತೆಗೆದುಕೊಂಡಿದ್ದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನನಗೂ ಇಂದು ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ನನ್ನ ಸಂಪರ್ಕದಲ್ಲಿರುವಂತ ಎಲ್ಲರೂ ಕೋವಿಡ್ ನಿಯಮಾನುಸಾರ ಪರೀಕ್ಷೆಗೆ ಒಳಪಡಿ. ಕೋವಿಡ್ ನಂತ್ರದಿಂದಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿ, ನಾನು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಮನವಿ ಮಾಡಿದ್ದಾರೆ.