ಮ್ಯಾನ್ಮಾರ್‌ನಿಂದ ದೆಹಲಿಗೆ ಬಂದ ನಾಲ್ವರಿಗೆ ಕೊರೋನಾ ಪಾಸಿಟಿವ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ವಿಮಾನ ನಿಲ್ದಾಣದಲ್ಲಿ ಮ್ಯಾನ್ಮಾರ್ನಿಂದ ಸೋಮವಾರ ಬಂದಿಳಿದ ನಾಲ್ವರು ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಅವರ ಕೋವಿಡ್ ಮಾದರಿಯನ್ನು ಜೀನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸಗುತ್ತಿದೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ಮ್ಯಾನ್ಮಾರ್ನಿಂದ ಆಗಮಿಸಿದ 690 ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ ನಾಲ್ವರಿಗೆ ಪಾಸಿಟಿವ್ ಬಂದಿದೆ. ಸೋಂಕಿತ ವ್ಯಕ್ತಿಗಳನ್ನು ದೆಹಲಿಯ ಡಾ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ(ಆರ್ಎಂಎಲ್) ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ಗಾಗಿ ಕಳುಹಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!