ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಅತ್ಯಾಚಾರ ಪ್ರಕರಣದ ಅಡಿಯಲ್ಲಿ ಜೈಲು ಶಿಕ್ಷೆಯನ್ನು ಅನುಭವಿಸುತ್ತಿರುವ ವಿವಾದಿತ ಸ್ವಯಂಘೋಷಿತ ದೇವಮಾನವ ಅಸಾರಾಂಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸೋಂಕು ಇವರನ್ನ ರಾಜಸ್ಥಾನದ ಜೋಧಪುರ ಎಂಡಿಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಸಾರಾಂ ಸೇರಿದಂತೆ ಜೈಲಿನ 12 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಅಸಾರಾಂರನ್ನ ಎಂಡಿಎಂ ಆಸ್ಪತ್ರೆಯ ಐಸಿಯುವಿನಲ್ಲಿ ಇಡಲಾಗಿದೆ. ಫೆಬ್ರವರಿ ತಿಂಗಳಲ್ಲಿ ಉಸಿರಾಟದ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಅಸಾರಾಂರನ್ನ ಜೋಧಪುರದ ಮಥುರಾ ದಾಸ್ ಮಾತುರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಅತ್ಯಾಚಾರ ಪ್ರಕರಣದ ಅಡಿಯಲ್ಲಿ ಅಸರಾಂ ಜೋಧಪುರದ ಜೈಲಿನಲ್ಲಿ ಬಂಧಿಯಾಗಿದ್ದಾರೆ.