ಕೊಡಗು ಜಿಲ್ಲೆಯಲ್ಲಿ ಒಂದೇ ದಿನ 1139 ಮಂದಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ವರದಿ,ಮಡಿಕೇರಿ:

ಭಾನುವಾರ ಸಂಜೆ 5ಗಂಟೆಗೆ ಕೊನೆಗೊಂಡಂತೆ ಕೊಡಗು ಜಿಲ್ಲೆಯಲ್ಲಿ 1139ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.33.95ಕ್ಕೆ ಏರಿಕೆಯಾಗಿದೆ.
ಕಳೆದ 24ಗಂಟೆಗಳಲ್ಲಿ ಮಡಿಕೇರಿ ತಾಲೂಕಿನಲ್ಲಿ 509, ಸೋಮವಾರಪೇಟೆ ತಾಲೂಕಿನಲ್ಲಿ 363 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 267 ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 39,641ರಷ್ಟಾಗಿದ್ದು, ಕಳೆದ 24ಗಂಟೆಗಳಲ್ಲಿ 95ದಿ ಗುಣಮುಖರಾಗಿದ್ದು, ಒಟ್ಟು 36,182 ಮಂದಿ ಸೋಂಕು ಮುಕ್ತರಾದಂತಾಗಿದೆ. ಕಳೆದ‌24ಗಂಟೆಗಳಲ್ಲಿ ಒಬ್ಬರು ಸೋಂಕಿಗೆ ಬಲಿಯಾಗುವುದರೊಂದಿಗೆ ಸತ್ತವರ ಸಂಖ್ಯೆ‌ 439ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಪ್ರಸಕ್ತ ಸಕ್ರಿಯ ಪ್ರಕರಣಗಳ ಸಂಖ್ಯೆ 3020ಕ್ಕೆ ಏರಿಕೆಯಾಗಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 218ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!