Sunday, April 11, 2021

Latest Posts

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಸದ್ಯಕ್ಕೆ ಅವರನ್ನು ಮುಂಜಾಗ್ರತಾ ಕ್ರಮವಾಗಿ ಕೋಳಿಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗುತ್ತದೆ ಎಂಬುದಾಗಿ ತಿಳಿದು ಬಂದಿದೆ.
75 ವರ್ಷದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೊರೋನಾ ಸೋಂಕಿನ ಪರೀಕ್ಷೆಗೆ ಒಳಗಾದ ನಂತ್ರ, ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಪ್ರಸ್ತುತ ಕಣ್ಣೂರಿನ ಅವರ ಮನೆಯಲ್ಲಿದ್ದು, ಸದ್ಯದಲ್ಲೇ ಕೋಳಿಕೋಡ್ ವೈದ್ಯಕೀಯ ಕಾಲೇಜಿಗೆ ಚಿಕಿತ್ಸೆಗಾಗಿ ದಾಖಲಿಸಲಾಗುತ್ತಿರುವುದಾಗಿ ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.
2021ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಏಪ್ರಿಲ್ 6, ಮಂಗಳವಾರ ಇತ್ತೀಚೆಗೆ ಸಾರ್ವಜನಿಕ ಸಂವಾದ ನಡೆಸಿದ್ದರು. ಸಿಎಂ ಪಿಣರಾಯಿ ಅವರ ಮಗಳು ವೀನಾ ವಿಜಯನ್ ಏಪ್ರಿಲ್ 6ರಂದು ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ ಸಂಜೆ 6 ಗಂಟೆಗೆ ಮತದಾನವನ್ನು ಪಿಪಿಇ ಕಿಟ್ ಧರಿಸಿ ಮಾಡಿದ್ದರು. ಈ ಬಳಿಕ ಅವರ ತಂದೆ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ತಮ್ಮ ಸಂಪರ್ಕದಲ್ಲಿದ್ದು, ಕೊರೋನಾ ಸೋಂಕಿನ ಲಕ್ಷಣಗಳಿದ್ದರೇ ಪರೀಕ್ಷೆಗೆ ಒಳಗಾಗುವಂತೆ ಸಿಎಂ ಮನವಿ ಮಾಡಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss