ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗಿರುವ ಜ್ವರದ ಲಕ್ಷಣದಿಂದಾಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಕೋವಿಡ್ ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಕೊಳ್ಳಲು ಮನವಿ ಮಾಡಿದ್ದಾರೆ.
ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಆರ್ ಅಶೋಕ್ ಕೊರೋನಾದಿಂದ ಗುಣಮುಖರಾಗಿದ್ದಾರೆ.
ನನಗಿರುವ ಜ್ವರದ ಲಕ್ಷಣದಿಂದಾಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಕೋವಿಡ್ ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಕೊಳ್ಳಲು ಮನವಿ ಮಾಡುತ್ತೇನೆ.#COVID19
— Kota Shrinivas Poojari (@KotasBJP) January 17, 2022