ಹೊಸದಿಗಂತ ಆನ್ ಲೈನ್ ಡೆಸ್ಕ್:
ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಗೆ ಕೊರೋನಾ ಪಾಸಿಟಿವ್ ಧೃಡವಾಗಿದೆ.
ಸಿಎಂ ಯಡಿಯೂರಪ್ಪ ಮತ್ತು ಇತರ ಹಲವು ಸಚಿವರ ಜೊತೆ ಪ್ರತಾಪ್ ಗೌಡ ಪಾಟೀಲ್ ಪ್ರಚಾರ ನಡೆಸಿದ್ದರು. ಪ್ರತಾಪ್ ಗೌಡ ಅವರಿಗೆ ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಆರ್ ಟಿ ಪಿ ಸಿ ಆರ್ ಟೆಸ್ಟ್ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಪ್ರತಾಪ್ ಗೌಡ ಪಾಟೀಲ್ ಗೆ ಸೋಂಕು ಧೃಡವಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.