Saturday, July 2, 2022

Latest Posts

ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕನ್ನಡ ಚಿತ್ರರಂಗ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಕಿರುತೆರೆ ರಿಯಾಲಿಟಿ ಶೋ ಹಾಗು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಅರ್ಜುನ್ ಜನ್ಯಗೆ, ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿದ್ದು, ತಪಾಸಣೆ ಮಾಡಿಸಿದಾಗ ವರದಿ ಪಾಸಿಟಿವ್ ಬಂದಿದೆ. ಹಾಗಾಗಿ, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರ ಆಪ್ತಮೂಲಗಳು ತಿಳಿಸಿವೆ.
ಇನ್ನು ಶೀಘ್ರದಲ್ಲೇ ಚೇತರಿಸಿಕೊಂಡು, ವೈದ್ಯರ ಸಲಹೆ ಮೇರೆಗೆ ಮತ್ತೆ ಕೆಲಸಕ್ಕೆ ಮರಳುತ್ತೇನೆ ಎಂದು ಅರ್ಜುನ್ ಜನ್ಯ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss