ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ ಚೆನ್ನಣ್ಣನವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ರವಿ ಡಿ ಚೆನ್ನಣ್ಣನವರ್, ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಸ್ಟೇ ಹೋಂ, ಸ್ಟೇ ಸೇಫ್ ಎಂಬುದಾಗಿ ತಿಳಿಸಿದ್ದಾರೆ.