Wednesday, July 6, 2022

Latest Posts

ಮಜಾ ಟಾಕೀಸ್ ನ ರೆಮೋ ಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಗಾಯಕಿ ಹಾಗೂ ಮಜಾ ಟಾಕೀಸ್‌ನ ಪ್ರಮುಖ ಪಾತ್ರಧಾರಿ ರೆಮೋ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಈ ಬಗ್ಗೆ ಇನ್​​ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಅವರು, ತಮಗೆ ಕೊರೋನಾ ಪಾಸಿಟಿವ್ ಬಂದಿದ್ದು, ಕಳೆದ 10 ಅಥವಾ 15 ದಿನಗಳಲ್ಲಿ ನನ್ನೊಂದಿಗೆ ನಿಕಟ ಸಂಪರ್ಕಕ್ಕೆ ಬಂದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಲಕ್ಷಣರಹಿತ ಸೋಂಕು ಇದಾಗಿದೆ. ದಯವಿಟ್ಟು ಮಾಸ್ಕ, ಹ್ಯಾಂಡ್ ಸ್ಯಾನಿಟೈಸರ್‌ಗಳನ್ನು ಬಳಸಿ. ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ನಿಮ್ಮ ಕೈಗಳನ್ನು ತೊಳೆಯಿರಿ. ನಾನು ಈಗ ಉತ್ತಮ ಸ್ಥಿತಿಯಲ್ಲಿದ್ದೇನೆ ಮತ್ತು ಶೀಘ್ರದಲ್ಲೇ ಮತ್ತೆ ಟ್ರ್ಯಾಕ್‌ಗೆ ಬರುತ್ತೇನೆ ಎಂದಿದ್ದಾರೆ ರೆಮೋ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss