ರಾಜ್ಯ ಶಿಕ್ಷಣ ಸಚಿವ ನಾಗೇಶ್​ ಅವರಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್​ ಅವರಿಗೆ ಕೊರೋನಾ ದೃಢಪಟ್ಟಿದೆ.
ಈ ಕುರಿತು ಮಾಹಿತಿ ನೀಡಿದ ಅವರು, ಕೋವಿಡ್-19 ಸೌಮ್ಯ ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ.ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!