Friday, July 1, 2022

Latest Posts

ಕರ್ನಾಟಕ ಸಹಿತ ಆರು ರಾಜ್ಯಗಳಲ್ಲಿ ಕೊರೋನಾ ಪ್ರಮಾಣ ಹೆಚ್ಚಳ: ಕೇಂದ್ರ ಆರೋಗ್ಯ ಇಲಾಖೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಕೇರಳ, ದೆಹಲಿ ಮತ್ತು ಉತ್ತರ ಪ್ರದೇಶ ಸೇರಿದಂತೆ ಆರು ರಾಜ್ಯಗಳು ‘ಕಾಳಜಿಯ ರಾಜ್ಯ’ಗಳಲ್ಲಿ ಸೇರಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ತಿಳಿಸಿದ್ದಾರೆ.
ದೆಹಲಿಯಲ್ಲಿಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರು ರಾಜ್ಯಗಳಲ್ಲಿ ಹೆಚ್ಚಿನ ಕೋವಿಡ್‌ ಪ್ರಕರಣಗಳು ದಾಖಲಾಗುತ್ತಿದ್ದು, ಈ ರಾಜ್ಯಗಳಿಗೆ ಕೇಂದ್ರದಿಂದ ಆರೋಗ್ಯ ತಂಡಗಳನ್ನು ಕಳುಹಿಸಲಾಗಿದೆ. ಈ ತಂಡ ನಿರಂತರವಾಗಿ ಪರಿಸ್ಥಿತಿಯನ್ನು ಪರಿಶೀಲನೆ ಮಾಡಲಿವೆ ಎಂದು ಮಾಹಿತಿ ನೀಡಿದರು.
ಭಾರತದಲ್ಲಿ ಕೋವಿಡ್ ಪ್ರಕರಣಗಳಲ್ಲಿ ತೀಕ್ಷ್ಣವಾದ ಉಲ್ಬಣವು ಕಂಡುಬಂದಿದೆ.
ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಕೇರಳ, ಉತ್ತರ ಪ್ರದೇಶ, ದೆಹಲಿ, ಪಶ್ಚಿಮ ಬಂಗಾಳ, ಗುಜರಾತ್‌, ಒಡಿಶಾ ಹಾಗೂ ರಾಜಸ್ಥಾನ ಸಕ್ರಿಯ ಪ್ರಕರಣಗಳಿರುವ ಅಗ್ರ 10 ರಾಜ್ಯಗಳಾಗಿವೆ.
ಈವರೆಗೆ 15 ರಿಂದ 18 ವರ್ಷದೊಳಗಿನ ಶೇ.52ರಷ್ಟು ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss