ಮತ್ತೆ ಏರಿಕೆಯಾದ ಕೊರೋನಾ : 8,822 ಹೊಸ ಕೇಸ್‌ ದಾಖಲು, 15 ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ನಿನ್ನೆ ತುಸು ಇಳಿಕೆ ಕಂಡಿದ್ದ ಕೋವಿಡ್ ಪ್ರಕರಣಗಳ ಸಂಖ್ಯೆಯು ಇಂದು ಮತ್ತೆ ಏರಿಕೆಯಾಗಿದ್ದು ಕಳದೆ 24 ಗಂಟೆಗಳಲ್ಲಿ ದೇಶದಾದ್ಯಂತ ಒಟ್ಟೂ 8,822 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದೆ. ಇದರಲ್ಲಿ ಮಹಾರಷ್ಟ್ರ, ಕೇರಳ, ದೆಹಲಿ, ಕರ್ನಾಟಕ ಮತ್ತು ಹರಿಯಾಣ ರಾಜ್ಯಗಳು ಮೇಲಿನ ಐದು ಸ್ಥಾನಗಳಲ್ಲಿವೆ.

ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಒಟ್ಟೂ 15 ಮಂದಿ ಸೋಂಕಿನಿಂದ ಮೃತರಾಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 53,637ಕ್ಕೆ ಏರಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ದರವು 2%ದಷ್ಟಿದೆ.

ಒಟ್ಟೂ 5,718 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು ಚೇತರಿಕಾ ದರವು 98.66% ದಷ್ಟಿದೆ. ಒಟ್ಟೂ 195.5 ಕೋಟಿಗೂ ಅಧಿಕ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!