ಕೋರೋನಾ ವರದಿ| ದೇಶದಲ್ಲಿ 16,000+ ಪ್ರಕರಣ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ದೇಶದಲ್ಲಿ ಕೊರೋನಾ ಪ್ರಕರಣಗಳು ವರದಿಯಾಗುತ್ತಲೇ ಇದ್ದು ಕಳೆದ 24 ಗಂಟೆಯಲ್ಲಿ 16,159 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 1,15,212 ರಷ್ಟಿದ್ದು ದೈನಂದಿನ ಪಾಸಿಟಿವಿಟಿ ದರವು 3.56% ದಷ್ಟಿದೆ. ಇನ್ನು ಕಳೆದ 24 ಗಂಟೆಯಲ್ಲಿ 15,394 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಚೇತರಿಕಾ ದರವು 98.53% ದಷ್ಟಿದೆ.

ಒಟ್ಟೂ 198.20 ಕೋಟಿ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!