ಕೊರೊನಾ ವರದಿ: ದೇಶದಾದ್ಯಂತ 17,135 ಹೊಸಕೇಸ್‌ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ದೇಶದಾದ್ಯಂತ ಕೋವಿಡ್‌ ಪ್ರಕರಣಗಳು ಪತ್ತೆಯಾಗುತ್ತಲೇ ಇದ್ದು ಕಳೆದ 24 ಗಂಟೆಯಲ್ಲಿ ಭಾರತದಾದ್ಯಂತ 17,135 ಹೊಸ ಕೇಸ್‌ ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 1,37,057 ರಷ್ಟಿದ್ದು ದೈನಂದಿನ ಪಾಸಿಟಿವಿಟಿ ದರವು 3.69%ದಷ್ಟಿದೆ ಮತ್ತು ವಾರಾಂತ್ಯದ ಪಾಸಿಟಿವಿಟಿ ದರವು 4.67% ದಷ್ಟಿದೆ.

ಕಳೆದ 24 ಗಂಟೆಯಲ್ಲಿ 19,823 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು ಇಲ್ಲಿಯವರೆಗೆ ಒಟ್ಟೂ 4,34,03,610 ಮಂದಿ ಕರೋನಾದಿಂದ ಗುಣಮುಖರಾಗಿದ್ದಾರೆ. ಚೇತರಿಕಾ ದರವು 98.46% ದಷ್ಟಿದೆ.

ಒಟ್ಟೂ 204.84 ಕೋಟಿಗೂ ಅಧಿಕ ಲಸಿಕೆ ವಿತರಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!