ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಲ್ಕು ವರ್ಷಗಳ ಕಾಲ ಜನರ ಜೀವ ಹಿಂಡಿದ ಕೊರೋನಾ ಮಾರಿ ಮತ್ತೆ ವಕ್ಕರಿಸುವ ಸಾಧ್ಯತೆ ಇದೆ. ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಗಡಿ ಭಾಗ ಪಾವಗಡದಲ್ಲಿಯೂ ಕೊರೋನಾ ಟೆನ್ಶನ್ ಆರಂಭವಾಗಿದೆ. ಪರಿಸ್ಥಿತಿ ಬಿಗಡಾಯಿಸುವ ಮುನ್ನವೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೋವಿಡ್ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದ್ದಾರೆ. ಆಂಧ್ರಪ್ರದೇಶಕ್ಕೆ ರಾಜ್ಯದ ಗಡಿಭಾಗವಾಗಿರುವ ಪಾವಗಡದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ತುರ್ತು ಸಭೆ ನಡೆಸಿ ಆರೋಗ್ಯ ಇಲಾಖೆಗೆ ಕಟ್ಟೆಚ್ಚರ ವಹಿಸಲು ಡಿಸಿ ನಿರ್ದೇಶನ ನೀಡಿದ್ದಾರೆ.



