ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಸರ್ಕಾರಿ ಆಸ್ವತ್ರೆಯಲ್ಲಿರುವ ಆರ್ಟಿಪಿಸಿಆರ್ ಪ್ರಯೋಗಾಲಯವನ್ನು ಸನ್ನದ್ಧಗೊಳಿಸಲಾಗುತ್ತಿದೆ.
ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಅದರಂತೆ ದೇವನಹಳ್ಳಿಯಲ್ಲಿಯೂ ಸಿದ್ಧತೆ ಆರಂಭಿಸಲಾಗಿದೆ. ದೇವನಹಳ್ಳಿಯ ಸರ್ಕಾರಿ ಆಸ್ವತ್ರೆಯಲ್ಲಿ ಕೋವಿಡ್ 2 ನೇ ಅಲೆ ಸಂದರ್ಭದಲ್ಲಿ ತೆರೆದಿದ್ದ ಆರ್ಟಿಪಿಸಿಆರ್ ಲ್ಯಾಬ್ ಅನ್ನು ಮಂಗಳವಾರ ಪುನರಾರಂಭ ಮಾಡಲಾಯಿತು.
ಅಧಿಕಾರಿಗಳು ಲ್ಯಾಬ್ನಲ್ಲಿರುವ ಟೆಸ್ಟಿಂಗ್ ಯಂತ್ರಗಳ ಪರಿಶೀಲನೆ ನಡೆಸಿದರು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಮಾದರಿ ಸಂಗ್ರಹ ಹಾಗೂ ಪರೀಕ್ಷೆಗೆ ಆರ್ಟಿಪಿಸಿಆರ್ ಲ್ಯಾಬ್ ಪುನರಾರಂಭ ಮಾಡಲಾಗಿದೆ. ಲ್ಯಾಬ್ಗಳಿಗೆ ಬೆಂಗಳೂರು ಗ್ರಾಮಾಂತರ ಡಿಹೆಚ್ಒ ಕೃಷ್ಣಾರೆಡ್ಡಿ ಬೇಟಿ ನೀಡಿ ಸಿದ್ದತೆಗಳ ಪರಿಶೀಲನೆ ನಡೆಸಿದ್ದಾರೆ.