ಹೊಸದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಅಧಿಕವಾಗುತ್ತಿದ್ದು, ಈ ಹಿನ್ನೆಲೆ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಹಲವು ಸಚಿವಾಲಯಗಳ ಪ್ರಮುಖ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಸಭೆಯಲ್ಲಿ ಪ್ರಧಾನಿ ಮೋದಿ ದೇಶದಲ್ಲಿ ಏರುತ್ತಿರುವ ಕೊರೋನಾ ಸೋಂಕನ್ನು ನಿಯಂತ್ರಣಕ್ಕೆ ತರುವ ಹಾಗೂ ವ್ಯಾಕ್ಸಿನೇಷನ್ ಪ್ರಕ್ರಿಯೆಗೆ ಮತ್ತಷ್ಟು ವೇಗ ನೀಡುವ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.
ದೇಶದ ಕೆಲವು ರಾಜ್ಯಗಳಲ್ಲಿ ಒಂದೇ ದಿನಕ್ಕೆ ಹತ್ತಾರು ಸಾವಿರ ಪ್ರಕರಣಗಳು ಪತ್ತೆಯಾಗುತ್ತಿದ್ದು ಕೆಲವೆಡೆ ವ್ಯಾಕ್ಸಿನ್, ರೆಮ್ಡಿಸಿವರ್ ಮತ್ತು ಆಕ್ಸಿಜನ್ ಕೊರತೆಯೂ ಎದುರಾಗಿರುವ ವರದಿಗಳಾಗುತ್ತಿವೆ. ಈ ಹಿನ್ನೆಲೆ ಪ್ರಧಾನಿ ಮೋದಿ ನಡೆಸುತ್ತಿರುವ ಸಭೆ ಮಹತ್ವ ಪಡೆದುಕೊಂಡಿದೆ.