Sunday, June 26, 2022

Latest Posts

ದೇಶದಲ್ಲಿ ಕೊರೋನಾ ಉಲ್ಬಣ: ಜೆಇಇ (ಮೇನ್ಸ್‌) ಪರೀಕ್ಷೆ ಮುಂದೂಡಿಕೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿನ​ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್​​ 27ರಿಂದ 30ರವರೆಗೆ ನಡೆಯಬೇಕಿದ್ದ ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಜೆಇಇ (ಮೇನ್ಸ್‌) ಪರೀಕ್ಷೆಯನ್ನು ಮುಂದೂಡಲಾಗಿದೆ.
ಕೋವಿಡ್ -19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆ ಮುಂದೂಡಲು ನಾನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್​ಟಿಎ)ಯ ಮಹಾನಿರ್ದೇಶಕರಿಗೆ ಸಲಹೆ ನೀಡಿರುವೆ. ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಅವರ ಶೈಕ್ಷಣಿಕ ಜೀವನ ನನ್ನ ಪ್ರಮುಖ ಕಾಳಜಿಯಾಗಿವೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ಟ್ವೀಟ್​ ಮಾಡಿದ್ದಾರೆ.
ಪರಿಷ್ಕೃತ ದಿನಾಂಕಗಳನ್ನು ಕನಿಷ್ಠ 15 ದಿನಗಳ ಮೊದಲು ಪ್ರಕಟಿಸಲಾಗುವುದು ಎಂದು ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss