spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಭೀತಿ: ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರದಿಂದ 800 ಕೋಟಿ ಭರವಸೆ!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೋವಿಡ್‌ ಮೂರನೇ ಅಲೆ ಹಿನ್ನೆಲೆಯಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗಾಗಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 800 ಕೋಟಿ ನೆರವು ನೀಡುವುದಾಗಿ ಆರೋಗ್ಯ ಸಚಿವ ಮನ್ಸುಖ್‌ ಮಾಂಡವಿಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್‌ ಮೂಲಕ ತಿಳಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿ ಪ್ರವಾಸದ ವೇಳೆ ಇಂದು ಆರೋಗ್ಯ ಸಚಿವರನ್ನು ಭೇಟಿಯಾಗಿದ್ದಾರೆ.
ಆರೋಗ್ಯ ಸಚಿವರೊಂದಿಗಿನ ಇಂದಿನ ಭೇಟಿಯ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿಗಳ ಕಚೇರಿ, ‘ಕೋವಿಡ್‌ ಮೂರನೇ ಅಲೆ ಹಿನ್ನೆಲೆಯಲ್ಲಿ ಐಸಿಯು, ವೈದ್ಯಕೀಯ ಆಮ್ಲಜನಕ ಮತ್ತು ಔಷಧಿಗಳನ್ನು ಒಳಗೊಂಡಂತೆ ಆರೋಗ್ಯ ಮೂಲಸೌಕರ್ಯ ವೃದ್ಧಿಗಾಗಿ ಕೇಂದ್ರ ಸರ್ಕಾರವು ರಾಜ್ಯಕ್ಕೆ 800 ಕೋಟಿ ನೆರವು ನೀಡಲಿರುವುದಾಗಿ ಆರೋಗ್ಯ ಸಚಿವ ಮನ್ಸುಖ್‌ ಮಾಂಡಿವಿಯಾ ಅವರು ಭರವಸೆ ನೀಡಿದ್ದಾರೆ.
ರಾಜ್ಯಕ್ಕೆ ಹೆಚ್ಚುವರಿ ಲಸಿಕೆ ಪೂರೈಕೆ ಪೂರೈಸುವಂತೆ ಸಿಎಂ ಬೊಮ್ಮಾಯಿ ಅವರು ಕೇಂದ್ರ ಆರೋಗ್ಯ ಸಚಿವರನ್ನು ವಿನಂತಿಸಿದರು. 1 ಕೋಟಿ ಲಸಿಕೆಗಳನ್ನು ಪೂರೈಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ. ರಾಜ್ಯವು ಪ್ರತಿ ದಿನ 2-3 ಲಕ್ಷ ಡೋಸ್ ಲಸಿಕೆಗಳನ್ನು ವಿತರಿಸಲು ಇದು ನೆರವಾಗಲಿದೆ ಎಂದು ಟ್ವೀಟ್‌ನಲ್ಲಿ ಹೇಳಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss