ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 227 ಮಂದಿಗೆ ಕೊರೋನಾ

ಹೊಸದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಗುರುವಾರ 227 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 198 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 670 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಇಬ್ಬರು ಸಾವಿಗೀಡಾದರು.

ಕೇರಳದಲ್ಲಿ 18,420 ಹೊಸ ಪ್ರಕರಣ

ಕೇರಳದಲ್ಲಿ ಗುರುವಾರ ಹೊಸದಾಗಿ 18,420 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 17,048 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 43,286 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 20 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಗುರುವಾರ ಶೇಕಡಾ 22.30 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!