ಹೊಸದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಭಾನುವಾರ 69 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.
ಮಡಿಕೇರಿ ತಾಲೂಕಿನಲ್ಲಿ 13, ಸೋಮವಾರಪೇಟೆ ತಾಲೂಕಿನಲ್ಲಿ 23 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 33ಹೊಸ ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 47,274ರಷ್ಟಾಗಿದೆ.
ಕಳೆದ 24ಗಂಟೆಗಳಲ್ಲಿ 16 ಮಂದಿ ಗುಣಮುಖರಾಗಿದ್ದು, ಇದುವರೆಗೆ ಒಟ್ಟು 45,706 ಮಂದಿ ಸೋಂಕು ಮುಕ್ತರಾದಂತಾಗಿದೆ. ಅಲ್ಲದೆ ಒಟ್ಟು 444ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ 1124ಸಕ್ರಿಯ ಪ್ರಕರಣಗಳಿದ್ದು,115 ಕಂಟೈನ್ ಮೆಂಟ್ ವಲಯಗಳು ಹಾಗೂ ಪಾಸಿಟಿವಿಟಿ ದರ ಶೇ.6.73ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.