ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 86 ಮಂದಿಗೆ ಕೊರೋನಾ

ಹೊಸದಿಗಂತ ವರದಿ,ಕಾಸರಗೋಡು:

ಜಿಲ್ಲೆಯಲ್ಲಿ ಮಂಗಳವಾರ 86 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 75 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 187 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಇಬ್ಬರು ಸಾವಿಗೀಡಾದರು.
ಕೇರಳದಲ್ಲಿ 5691 ಹೊಸ ಪ್ರಕರಣ

ಕೇರಳದಲ್ಲಿ ಮಂಗಳವಾರ ಹೊಸದಾಗಿ 5691 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 5211 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 10,896 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 10 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮಂಗಳವಾರ ಶೇಕಡಾ 10.01 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!