ಹೊಸದಿಗಂತ ಆನ್ ಲೈನ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರ್ ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈ ಹಿನ್ನೆಲೆ ಶಾಸಕಿ ಅನಿತಾ ಕುಮಾರಸ್ವಾಮಿ ಹೋಂ ಕ್ವಾರಂಟೈನ್ ಆಗಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ, ಪತಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಕೋವಿಡ್-19 ಸೋಂಕಿಗೆ ಒಳಗಾಗಿರುವುದರಿಂದ, ತಾನು ಕೂಡ ಮುಂಜಾಗ್ರತಾ ಕ್ರಮವಾಗಿ, ಹೋಂ-ಕ್ವಾರಂಟೈನ್ ಆಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ವೈದ್ಯರ ಮುಂದಿನ ಸೂಚನೆ ಬರುವವರೆಗೂ ಹೋಂ ಕ್ವಾರಂಟೈನ್ ನಲ್ಲೇ ಇರುತ್ತೇನೆ ಎಂಬುದಾಗಿ ತಿಳಿಸಿದ್ದಾರೆ.