Thursday, August 18, 2022

Latest Posts

CORONA UPDATE| ಕೊರೋನಾ ಸೋಂಕಿತರಿಗಿಂತ ಗುಣಮುಖರ ಸಂಖ್ಯೆಯಲ್ಲಿ ಏರಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 38,948 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ 42,766 ಇದ್ದ ಕೊರೋನಾ ಸೋಂಕಿತರ ಸಂಖ್ಯೆ ಇಂದು ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 43,903 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,21,81,995ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,04,874 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 219ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,40,752 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!