Wednesday, August 10, 2022

Latest Posts

ಮತ್ತೆ ಏರಿಕೆಯಾಗ್ತಿದೆ ಕೊರೋನಾ ಪ್ರಕರಣ: ದೇಶಕ್ಕೆ ಕಾಲಿಟ್ಟಿತಾ ಮೂರನೇ ಅಲೆ?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು,, ಕಳೆದ 24 ಗಂಟೆಯಲ್ಲಿ  30,570 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ 27,176  ಇದ್ದ ಕೊರೋನಾ ಸೋಂಕಿತರ ಸಂಖ್ಯೆ ಇಂದು ಏರಿಕೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 27,176 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 3,33,47,325 ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 38,303 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,25,60,474ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,42,923 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 431 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,43,928 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss