Monday, August 8, 2022

Latest Posts

ಅತ್ತ ಏರುತ್ತಿಲ್ಲ, ಇತ್ತ ಇಳಿಯುತ್ತಿಲ್ಲ… ನಿಂತ ನೀರಂತಿದೆ ಕೋರೋನಾ ಸೋಂಕಿತರ ಸಂಖ್ಯೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ, ಕಳೆದ 24 ಗಂಟೆಯಲ್ಲಿ    30,773 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ  35,662  ಇದ್ದ ಸೋಂಕಿತರ ಸಂಖ್ಯೆ ಇಂದು ಇಳಿಕೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 27,176 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 3,34,17,390 ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 3,26,71,167 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,34,48,163ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,32,158 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 309 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,44,838 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss