Wednesday, June 29, 2022

Latest Posts

ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ ಕೊರೋನಾ ಸೋಂಕಿತರ ಸಂಖ್ಯೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ  14,146 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಕೊವಿಡ್ ಸೋಂಕಿತರ ಸಂಖ್ಯೆ 3,40,67,719ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 19,788 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,34,19,749 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 1,95,846 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 144 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,52,124 ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss