ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 30,941 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ 42,909ಇದ್ದ ಕೊರೋನಾ ಸೋಂಕಿತರ ಸಂಖ್ಯೆ ಇಂದು ಇಳಿಕೆಯಾಗಿದೆ.
ನಿನ್ನೆ ಒಂದೇ ದಿನ ದೇಶದಲ್ಲಿ 34,763 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,19,59,680 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,70,640 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಒಂದೇ ದಿನ ದೇಶಾದ್ಯಂತ 350ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,38,560 ಕ್ಕೆ ಏರಿಕೆಯಾಗಿದೆ.