Friday, July 1, 2022

Latest Posts

CORONA UPDATE| ಕೊರೋನಾ ಪ್ರಕರಣದಲ್ಲಿ ಕೊಂಚ ಇಳಿಕೆ: ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಸ್ಥಿರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 91,702 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 91,702 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು,  ಒಟ್ಟಾರೆ ಸೋಂಕಿತರ ಸಂಖ್ಯೆ 2,92,74,823 ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 1,34,580 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 2,77,90,073 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 11,21,671 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 3,403 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,63,079 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss