ಹೊಸದಿಗಂತ ಆನ್ ಲೈನ್ ಡಸ್ಕ್:
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ನಿನ್ನೆ ಒಂದೇ ದಿನ 26,291 ಹೊಸ ಪ್ರಕರಣಗಳು ಪತ್ತಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,13,85,339ಕ್ಕೆ ಏರಿಕೆಯಾಗಿದ್ದು, ಈ ಪೈಕಿ 2,19,262 ಸಕ್ರಿಯ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 24 ಗಂಟೆಗಳಲ್ಲಿ 17,455 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,10,07,352ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 118 ಮಂದಿ ಸೋಂಕಿಗೆ ಬಲಿಯಾಗಿದ್ದು, ದೇಶದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 1,58,725ಕ್ಕೆ ಏರಿಕೆಯಾಗಿದೆ.