Sunday, June 26, 2022

Latest Posts

ಲಕ್ಷಕ್ಕಿಂತ ಕಡಿಮೆಯಾಯ್ತು ಕೊರೋನಾ ಸೋಂಕಿತರ ಸಂಖ್ಯೆ.. ನಿನ್ನೆ ಪತ್ತೆಯಾದ ಪ್ರಕರಣಗಳೆಷ್ಟು ಗೊತ್ತಾ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 86,498  ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 86,498 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 2,89,96,473ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 3,26,850 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 2,73,41,462 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 13,03,702 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 2123 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ3,51,309 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss