ದಿಗಂತ ವರದಿ ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಶುಕ್ರವಾರ 33 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಮಡಿಕೇರಿ ತಾಲೂಕಿನಲ್ಲಿ 7,ಸೋಮವಾರಪೇಟೆ ತಾಲೂಕಿನಲ್ಲಿ16,ವೀರಾಜಪೇಟೆ ತಾಲೂಕಿನಲ್ಲಿ 10 ಹೊಸ ಕೋವಿಡ್ ಪ್ರಕರಣಗಳು ಕಂಡುಬಂದಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 34,705 ರಷ್ಟಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 16 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮುಕ್ತರಾದವರ ಸಂಖ್ಯೆ 33,666 ರಷ್ಟಾಗಿದೆ.
ಪ್ತಸಕ್ತ 615 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ ಒಟ್ಟು 424 ಮಂದಿ ಸಾವಿಗೀಡಾಗಿದ್ದಾರೆ. ಕಂಟೈನ್ಮೆಂಟ್ ವಲಯಗಳ ಸಂಖ್ಯೆ 52ರಷ್ಟಿದ್ದು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.1.05ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ