ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಭಾರತದ ಜನರನ್ನು ನಿರ್ಲಕ್ಷಿಸಿ ಕೊರೋನಾ ಲಸಿಕೆಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡಿಲ್ಲ: ಅದಾರ್ ಪೂನಾವಾಲಾ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಭಾರತದ ಜನರನ್ನು ನಿರ್ಲಕ್ಷಿಸಿ ತಮ್ಮ ಸಂಸ್ಥೆ ಕೊರೋನಾ ಲಸಿಕೆಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡಿಲ್ಲ. ದೇಶದಲ್ಲಿ ಲಸಿಕಾ ಅಭಿಯಾನಕ್ಕೆ ನೆರವಾಗಲು ತಮ್ಮಿಂದ ಸಾಧ್ಯವಾಗುವ ಎಲ್ಲಾ ಪ್ರಯತ್ನಗಳನ್ನು ಮಾಡುವಲ್ಲಿ ಬದ್ಧವಾಗಿರುವುದಾಗಿ ಕೋವಿಶೀಲ್ಡ್‌ ಕೊರೋನಾ ಲಸಿಕೆಗಳ ಉತ್ಪಾದನೆಯಲ್ಲಿ ತೊಡಗಿಕೊಂಡಿರುವ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಸಿಇಒ ಅದಾರ್ ಪೂನಾವಾಲಾ ತಿಳಿಸಿದ್ದಾರೆ.

ಬೇರೆ ದೇಶಗಳಿಗೆ ಲಸಿಕೆಗಳನ್ನು ರಫ್ತು ಮಾಡುವ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಅವರು, ಈ ಜನವರಿಯಲ್ಲಿ ನಮ್ಮ ಸಂಸ್ಥೆಯಲ್ಲಿ ಹೆಚ್ಚು ಲಸಿಕೆಗಳನ್ನು ಉತ್ಪಾದಿಸಲಾಗಿತ್ತು. ಆಗ ಭಾರತದಲ್ಲಿ ಪ್ರಕರಣಗಳ ಸಂಖ್ಯೆಯೂ ಕಡಿಮೆಯಿತ್ತು. ಇದೇ ಸಮಯದಲ್ಲಿ ಬೇರೆ ದೇಶಗಳಲ್ಲಿ ಲಸಿಕೆಗಳ ಅವಶ್ಯಕತೆ ತೀವ್ರವಾಗಿತ್ತು. ಹೀಗಾಗಿ ರಫ್ತು ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು. ದೇಶ ದೇಶಗಳ ನಡುವೆ ಸಹಕಾರ ನೀಡುವುದು ಮುಖ್ಯವಾಗಿದೆ. ಭಾರತ ಬೇರೆ ದೇಶಗಳಿಗೆ ನೆರವಾಗಿದ್ದ ಕಾರಣಕ್ಕೆ ಇಂದು ಭಾರತಕ್ಕೂ ಬೇರೆ ದೇಶಗಳು ನೆರವು ನೀಡುತ್ತಿವೆ ಎಂದು ತಿಳಿಸಿದರು.

ಕೊರೋನಾ ಸೋಂಕನ್ನು ಜಾಗತಿಕವಾಗಿ ಸೋಲಿಸದ ಹೊರತು ಯಾರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ. ಭಾರತದಲ್ಲಿನ ಇಡೀ ಜನಸಂಖ್ಯೆಗೆ ಲಸಿಕೆ ನೀಡುವಲ್ಲಿ ಹಲವು ಸವಾಲುಗಳಿವೆ . ಎರಡು ಮೂರು ತಿಂಗಳುಗಳಲ್ಲೇ ಲಸಿಕಾ ಕಾರ್ಯಕ್ರಮಗಳು ಮುಗಿಯುವಂಥದ್ದಲ್ಲ. ಇದು ವರ್ಷಗಟ್ಟಲೆ ಹಿಡಿಯಬಹುದು ಎಂದರು.

ಜಾಗತಿಕವಾಗಿ ಭಾರತ ಸಹಿತ ಹಲವು ದೇಶಗಳು ಕೊರೋನಾ ಸೋಂಕಿನಿಂತ ತತ್ತರಿಸುತ್ತಿವೆ. ಕಳೆದ ಕೆಲವು ದಿನಗಳಿಂದ ಲಸಿಕೆಗಳ ರಫ್ತಿನ ಸಂಬಂಧ ಸರ್ಕಾರ ಹಾಗೂ ಲಸಿಕಾ ಉತ್ಪಾದನಾ ಸಂಸ್ಥೆಗಳ ನಡುವೆ ಚರ್ಚೆ ನಡೆದಿದೆ ಎಂದು ತಿಳಿಸಿದರು. ಆದರೆ ಭಾರತದ ಜನರನ್ನು ಆದ್ಯತೆಯಾಗಿಟ್ಟುಕೊಂಡೇ ಲಸಿಕೆಗಳ ರಫ್ತು ನಡೆಯುತ್ತದೆ. ಸೋಂಕಿನ ವಿರುದ್ಧ ಒಗ್ಗಟ್ಟಾಗಿ ಹೋರಾಡುವುದು ಈಗ ತುರ್ತಾಗಿದೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss