ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಹೆಚ್ಚಳ: 5 ಮಂದಿಗೆ ಪಾಸಿಟಿವ್

ಹೊಸದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುವ ಲಕ್ಷಣಗಳು ಗೋಚರಿಸಿವೆ. ಸೋಮವಾರ ಒಂದೇ ದಿನ 5 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಒಟ್ಟು 62 ಮಂದಿಯನ್ನು ತಪಾಸಣೆಗೊಳಪಡಿಸಲಾಗಿದ್ದು, ಈ ಪೈಕಿ ಐದು ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಕೋವಿಡ್ ಬುಲೆಟಿನಲ್ಲಿ ಉಲ್ಲೇಖಿಸಲಾಗಿದೆ.

ಐದು ಮಂದಿ ಕೂಡ ಮಂಗಳೂರಿನವರಾಗಿದ್ದು, ಮೂರು ಮಂದಿ ಐಸಿಯುವಿನಲ್ಲಿ ಮತ್ತು ಇಬ್ಬರು ಹೋಮ್ ಐಸೋಲೇಟೆಡ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರ ಪೈಕಿ 86 ವಷ, 51, 71, 81 ಮತ್ತು 32 ವರ್ಷ ವಯಸ್ಸಿನವರಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 436 ಕ್ಕೆ ಏರಿಕೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!