ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾ ಸಹಿತ ವಿದೇಶಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಕೆ ಕಂಡು ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ನಾಳೆ ಸಾಂಕ್ರಾಮಿಕ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.
ಅಂತಾರಾಷ್ಟ್ರಿಯ ಮಟ್ಟದ ಕೊರೋನಾ ಪರಿಸ್ಥಿತಿಯ ಕುರಿತು ನಾಳೆ ಬೆಳಗ್ಗೆ 11 ಗಂಟೆಗೆ ಪರಿಶೀಲಿಸಲಿದ್ದಾರೆ.
ಈಗಾಗಲೇ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಎಚ್ಚರಿಕೆಯಿಂದ ಇರಲು ಸೂಚಿಸಿದೆ.