ರಾಜ್ಯದಲ್ಲಿ 50 ಸಾವಿರ ಗಡಿ ದಾಟಿದ ಕೊರೋನಾ, 19 ಜನರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಇಂದು 50 ಸಾವಿರ ಗಡಿ ದಾಟಿದೆ ಕೊರೋನಾ ಸೋಂಕಿನ ಪ್ರಮಾಣ. ಕಳೆದ 24 ಗಂಟೆಯಲ್ಲಿ ಹೊಸದಾಗಿ 50,210 ಮಂದಿಗೆ ಸೋಂಕು ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ , ಬೆಂಗಳೂರಿನ 26,299 ಸೇರಿದಂತೆ ರಾಜ್ಯದಲ್ಲಿ 50,210 ಜನರಿಗೆ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟಿರೋದಾಗಿ ತಿಳಿಸಿದ್ದಾರೆ. 19  ಜನರು ಸಾವನ್ನಪ್ಪಿದ್ದಾರೆ.
ಪಾಸಿಟಿವಿಟಿ ದರ ಶೇ.22.77ಕ್ಕೆ ಏರಿಕೆಯಾಗಿದೆ. ಸೋಂಕಿತರಾದಂತ 22,842 ಮಂದಿ ಗುಣಮುಖರಾಗಿದ್ದಾರೆ. ಹೀಗಾಗಿ ಸದ್ಯ ಬೆಂಗಳೂರಿನಲ್ಲಿ 2.31 ಲಕ್ಷ ಸೇರಿದಂತೆ ರಾಜ್ಯದಲ್ಲಿ 3,57,796 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!