ಕೊರೋನಾ ಆತಂಕದ ನಡುವೆ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ಡೆಲ್ಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೋವಿಡ್​ 19 ಕಾಟದ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಗಾಯದಿಂದ ಚೇತರಿಸಿಕೊಂಡ ತಂಡಕ್ಕೆ ಮರಳಿದ್ದ ಮಿಚೆಲ್ ಮಾರ್ಷ್​ ಕೋವಿಡ್ 19ಗೆ ತುತ್ತಾಗಿ ಆಸ್ಪತ್ರೆಯಲ್ಲಿದ್ದಾರೆ. ಹಾಗಾಗಿ ಇಂದಿನ ಪಂದ್ಯಕ್ಕೆ ಅವರ ಸ್ಥಾನದಲ್ಲಿ ಸರ್ಫರಾಜ್​ ಅಹ್ಮದ್​ ಕಣಕ್ಕಿಳಿಯುತ್ತಿದ್ದಾರೆ.
ಇತ್ತ ಪಂಜಾಬ್ ತಂಡಕ್ಕೆ ನಾಯಕ ಮಯಾಂಕ್ ಅಗರ್ವಾಲ್ ಕಮ್​ಬ್ಯಾಕ್ ಮಾಡಿದ್ದಾರೆ. ವಿಂಡೀಸ್ ಆಲ್​ರೌಂಡರ್ ಒಡಿಯನ್​ ಸ್ಮಿತ್​ರನ್ನು ತಂಡದಿಂದ ಕೈಬಿಟ್ಟಿದ್ದು, ಅವರ ಜಾಗಕ್ಕೆಆಸ್ಟ್ರೇಲಿಯಾದ ನೇಥನ್ ಎಲ್ಲಿಸ್​ಗೆ ಅವಕಾಶ ನೀಡಲಾಗಿದೆ.

ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಮಯಾಂಕ್ ಅಗರ್ವಾಲ್ (ಸಿ), ಶಿಖರ್ ಧವನ್, ಜಾನಿ ಬೈರ್‌ಸ್ಟೋ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ಪ), ಶಾರುಖ್ ಖಾನ್, ಕಗಿಸೊ ರಬಾಡ, ನಾಥನ್ ಎಲ್ಲಿಸ್, ರಾಹುಲ್ ಚಾಹರ್, ವೈಭವ್ ಅರೋರಾ, ಅರ್ಷ್‌ದೀಪ್ ಸಿಂಗ್

ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಪೃಥ್ವಿ ಶಾ, ಡೇವಿಡ್ ವಾರ್ನರ್, ರಿಷಬ್ ಪಂತ್ (w/c), ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಸರ್ಫರಾಜ್ ಖಾನ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!