ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಕೊರೋನಾ ರೂಪಾಂತರಿ ಆರ್ಭಟ ಆರಂಭವಾಗಿದೆ. ಕಳೆದ 24 ಗಂಟೆಯಲ್ಲಿ 358 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ ಕೊರೋನಾದಿಂದಾಗಿ ಮೂವರು ಮೃತಪಟ್ಟಿದ್ದಾರೆ. ಕೇರಳ, ಕರ್ನಾಟಕ, ಗುಜರಾತ್, ತಮಿಳುನಾಡು ಹಾಗೂ ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳು ದಾಖಲಾಗಿವೆ.
ದೇಶದಲ್ಲಿ ಕೊರೋನಾ ನಿಧಾನವಾಗಿ ಹರಡುತ್ತಿದೆ, ಅಂತೆಯೇ ಚೇತರಿಕೆ ಸಂಖ್ಯೆ ಶೇ.98.81ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಿರುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಧ್ಯಾಹ್ನ ಒಂದು ಗಂಟೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಗುತ್ತದೆ.