ಮತ್ತೆ ಕೊರೋನಾ ಆತಂಕ: ಖಾಸಗಿ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದೇಶದಲ್ಲಿ ಮತ್ತೆ ಕೊರೋನಾ ಹೆಚ್ಚುತ್ತಿರುವ ಅತಂಕ ಮನೆ ಮಾಡಿದ್ದು , ಈ ಹಿನ್ನೆಲೆ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾಗೃತಾ ಕ್ರಮವಾಗಿ ಖಾಸಗಿ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.
ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗುವ ಮುನ್ನವೇ ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಖಾಸಗಿ ಶಾಲೆಗಳಲ್ಲಿ ಮಕ್ಕಳು, ಶಿಕ್ಷಕರು, ಸಿಬ್ಬಂದಿಗಳಿಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ.
ಶಾಲೆಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ ಪಾಲನೆ, ನೆಗಡಿ, ಕೆಮ್ಮು, ಜ್ವರ ಬಂದರೆ ತಕ್ಷಣ ಕೋವಿಡ್ ಟೆಸ್ಟ್ ಗೆ ಒಳಗಾಗುವಂತೆ ಸೂಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!