ಮತ್ತೆ ಕೊರೋನಾ ಆತಂಕ: ಇಂದು ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚೀನಾ, ಜಪಾನ್ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಆರ್ಭಟ ಹೆಚ್ಚಾಗಿದ್ದು, ಭಾರತದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಲು ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.

ಮುಂಜಾಗ್ರತಾ ಕ್ರಮಗಳು, ವ್ಯಾಕ್ಸಿನ್, ಕೊರೋನಾ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಲು ಸಭೆ ನಡೆಸಲಾಗುತ್ತದೆ. ಕಳೆದ ೨೪ ಗಂಟೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಐದು ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗದಂತೆ ನೋಡಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗುವುದು.
ಚೀನಾದಲ್ಲಿ ಕೋವಿಡ್ ಪರಿಸ್ಥಿತಿ ಕೈಮೀರಿದ್ದು, ಐಸಿಯುಗಳಲ್ಲಿ ಬೆಡ್ ಭರ್ತಿಯಾಗಿದೆ. ಇನ್ನು ವಿದೇಶಗಳಿಂದ ಭಾರತಕ್ಕೆ ಬರುವವರ ತಪಾಸಣೆ ಮಾಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!