ಕೊರೋನಾ ಆತಂಕ | ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಿಲಿಂಡರ್‌ ಗಳ ಬಗ್ಗೆ ಗಮನ ಹರಿಸಿ: ಕೇಂದ್ರ ಸರಕಾರದಿಂದ ರಾಜ್ಯಗಳಿಗೆ ಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ವಿದೇಶಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ದಿನೇ ದಿನೇ ಅಧಿಕವಾಗುತ್ತಿದ್ದು, ಈ ಹಿನ್ನೆಲೆ ಯಾವುದೇ ಸವಾಲುಗಳನ್ನು ಎದುರಿಸಲು ಆಸ್ಪತ್ರೆಗಳಲ್ಲಿ ಆಕ್ಸಿಜನ್ , ಸಿಲಿಂಡರ್‌ಗಳ ಸಾಕಷ್ಟು ದಾಸ್ತಾನು ಮತ್ತು ವೆಂಟಿಲೇಟರ್‌ಗಳಂತಹ ಜೀವರಕ್ಷಕ ಸಾಧನಗಳು ಲಭ್ಯವಿರುವಂತೆ ನೋಡಿಕೊಳ್ಳಿ ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಆರೋಗ್ಯ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮನೋಹರ್ ಅಗ್ನಾನಿ, ದೇಶದಲ್ಲಿ ಕೊರೋನಾ ಪ್ರಮಾಣ ಇಳಿಕೆ ಇದ್ದು, ಆದ್ರೂ ನಾವು ನಿರ್ಲಕ್ಷ್ಯ ತೋರದೆ ಯಾವುದೇ ಸಂದರ್ಭಗಳನ್ನು ಎದುರಿಸಲು ವೈದ್ಯಕೀಯ ಮೂಲಸೌಕರ್ಯಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಅತ್ಯಂತ ಮಹತ್ವದ್ದಾಗಿದೆ. ಹಾಗಾಗಿ ನಾವು ಈ ಬಗ್ಗೆ ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದರು.

ಇದೇ ವೇಳೆ ಪ್ರೆಶರ್ ಸ್ವಿಂಗ್ ಅಡ್ಸಾರ್ಪ್ಶನ್ (PSA) ಆಮ್ಲಜನಕವನ್ನು ಉತ್ಪಾದಿಸುವ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ತಿಳಿದುಕೊಳ್ಳುವಂತೆ ಮತ್ತು ಅವುಗಳನ್ನು ಪರಿಶೀಲಿಸಲು ನಿಯಮಿತ ಅಣಕು ಪ್ರದರ್ಶನ ನಡೆಸುವಂತೆ ಆರೋಗ್ಯ ಸಚಿವಾಲಯವು ಹೇಳಿದೆ.

ಕೊರೋನಾದಂತಹ ಸಂದರ್ಭ ಎಲ್ಲಾ ಕ್ಲಿನಿಕಲ್ ಸೆಟ್ಟಿಂಗ್‍ಗಳಲ್ಲಿ ವೈದ್ಯಕೀಯ ಆಮ್ಲಜನಕವು ಪ್ರಮುಖವಾಗಿದೆ. ಹಾಗಾಗಿ ಎಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲ್ಯಾಂಟ್‌ ಸುಸ್ಥಿತಿಯಲ್ಲಿ ನೋಡಿಕೊಳ್ಳಿ. ಜೊತೆಗೆ ಐಸಿಯು ವ್ಯವಸ್ಥೆ ಸರಿಯಾಗಿ ನಿರ್ವಹಣೆ ಬಗ್ಗೆ ಕ್ರಮ ವಹಿಸಿ. ವಾರ ವಾರ ಸಭೆ ನಡೆಸಿ ಮಾಹಿತಿ ನೀಡಿ ಎಂದು ಸೂಚಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!