ಕೊರೋನಾ ಆತಂಕ: ಎಲ್ಲ ರಾಜ್ಯಗಳಿಗೆ ನಾಲ್ಕು ಸೂತ್ರ ನೀಡಿದ ಕೇಂದ್ರ ಸಚಿವರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದೇಶದಲ್ಲಿ ಕೊರೋನಾ ಆತಂಕ ಹೆಚ್ಚುತ್ತಿದ್ದು, ಈ ಹಿನ್ನೆಲೆಕೇಂದ್ರ ಸರ್ಕಾರವು ಸೋಂಕಿನ ನಿಗ್ರಹಕ್ಕೆ ನಾಲ್ಕು ಸೂತ್ರ ಪಾಲಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಅದ್ರಂತೆ ‘ಎಲ್ಲಾ ರಾಜ್ಯಗಳು ಕೊರೋನಾ ತಪಾಸಣೆ, ಪತ್ತೆ, ಚಿಕಿತ್ಸೆ ಹಾಗೂ ಕ್ಷಿಪ್ರವಾಗಿ ಚಿಕಿತ್ಸೆ ನೀಡಲು ಕ್ರಮ ತೆಗೆದುಕೊಳ್ಳಬೇಕು’ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಂಡಾವಿಯ ತಿಳಿಸಿದ್ದಾರೆ.

ಯಾವ ರೀತಿ ಕೊರೋನಾ ಮೊದಲ ಮೂರು ಅಲೆಗಳಲ್ಲಿ ಕಾರ್ಯನಿರ್ವಹಿಸಿದಂತೆಯೇ ಹಾಗೆಯೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು. ಹೆಚ್ಚಿನ ಸೋಂಕಿನ ಮೇಲೆ ನಿಗಾ ಇರಿಸಬೇಕು. ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಬೇಕು. ಹಾಸಿಗೆ ಸಾಮರ್ಥ್ಯ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಭೆಯಲ್ಲಿ ಸೂಚಿಸಿದ್ದಾರೆ.

ಅದೇ ರೀತಿ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿಯ ವೇಳೆ ಚಿಕಿತ್ಸೆ ನೀಡುವ ಕುರಿತು ಅಣಕು ಪ್ರದರ್ಶನ ಕೈಗೊಳ್ಳಬೇಕು. ಆ ಮೂಲಕ ವೈದ್ಯಕೀಯ ಸಿಬ್ಬಂದಿಯನ್ನು ಉತ್ತಮ ಚಿಕಿತ್ಸೆ ನೀಡಲು ತಯಾರಿರುವಂತೆ ನೋಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಹಬ್ಬಗಳು ಇರುವುದರಿಂದ ಹೆಚ್ಚಿನ ನಿಗಾ, ತಪಾಸಣೆ ಅಗತ್ಯ ಎಂದು ಹೇಳಿದ್ದಾರೆ.

ಮುಂದಿನ ವಾರ ಮತ್ತೊಂದು ಸಭೆ ನಡೆಸಲು ಕೂಡ ಮಂಡಾವಿಯ ತೀರ್ಮಾನಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!