ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದ್ದು, 4ನೇ ಅಲೆ ಭೀತಿ ಎದುರಾಗಿದ್ದು, ರಾಜ್ಯ ಸರ್ಕಾರ ಮತ್ತು ಕಠಿಣ ನಿಯಮಾವಳಿಗಳನ್ನು ಜಾರಿಗೆ ತರಲು ಮುಂದಾಗಿದೆ.
ಇದಕ್ಕಾಗಿ ಈಗಾಗಲೇ ಸರಕಾರ ಮಾರ್ಗಸೂಚಿ ಹೊರಡಿಸಿದ್ದು, ಮಾಸ್ಕ್ ಧಾರಣೆ ಕಡ್ಡಾಯ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮೊದಲಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಈಗಾಗಲೇ ಸೂಚನೆ ರವಾನಿಸಿದ್ದು, ನಿಯಮವನ್ನು ಪಾಲಿಸದಿದ್ದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲು ಚಿಂತನೆ ನಡೆಸಿದೆ.
ಇತ್ತ ಶಾಲಾ-ಕಾಲೇಜುಗಳೂ ಕೊರೋನಾ ಕಾಟ ಶುರುವಾಗಿದ್ದು, ಕೋವಿಡ್ ನಿಯಮಗಳನ್ನು ಪಾಲಿಸಲು ತಿಳಿಸಲಾಗಿದೆ. ಇದರ ಮಧ್ಯೆ ಬೆಂಗಳೂರಿನ ದಾಸರಹಳ್ಳಿಯಲ್ಲಿರುವ ಎರಡು ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ .
ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಡಾ. ಸುಧಾಕರ್, ಇಂತಹ ಶಾಲೆಗಳನ್ನು ಕ್ಲೋಸ್ ಮಾಡಿ ಕೊರೋನಾ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ತಿಳಿಸಿದ್ದಾರೆ.