Sunday, April 18, 2021

Latest Posts

10 ಜಿಲ್ಲೆಗಳಲ್ಲಿ ಕೊರೋನಾ ಹೆಚ್ಚಳ: ‘ಜಿಲ್ಲಾಧಿಕಾರಿಗಳ ಹಳ್ಳಿಗಳ ಭೇಟಿ’ ,’ಗ್ರಾಮ ವಾಸ್ತವ್ಯ’ ಸ್ಥಗಿತಗೊಳಿಸಿ ರಾಜ್ಯ ಸರಕಾರ ಆದೇಶ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯದ 10 ಜಿಲ್ಲೆಗಳಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’, ಹಳ್ಳಿಗಳ ಭೇಟಿ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಕಂದಾಯ ಇಲಾಖೆಯ ಇವರು ಆದೇಶ ಹೊರಡಿಸಿದ್ದಾರೆ.
೧೦ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ( ನಗರ), ಬೆಂಗಳೂರು ( ಗ್ರಾಮಾಂತರ),ಬೀದರ್,ದಕ್ಷಿಣ ಕನ್ನಡ,ಹಾಸನ,ಕಲಬುರಗಿ,ಮಂಡ್ಯ,ಮೈಸೂರು, ತುಮಕೂರಿನಲ್ಲಿ ಅತಿ ಹೆಚ್ಚು ಸೋಂಕಿನ ಪ್ರಕರಣಗಳು ಕಂಡು ಬರುತ್ತಿದ್ದು, ಸಾರ್ವಜನಿಕರು ಒಂದೆಡೆ ಗುಂಪು ಗುಂಪಾಗಿ ಸೇರಿದಲ್ಲಿ ಈ ಸಾಂಕ್ರಾಮಿಕ ರೋಗ ಇನ್ನೂ ಕೂಡ ಹೆಚ್ಚಾಗಿ ಹರಡುವ ಸಾಧ್ಯತೆಯಿದೆ. ಆದ್ದರಿಂದ ಮುಂದಿನ ಆದೇಶದವರೆಗೂ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ , ಹಳ್ಳಿಗಳ ಭೇಟಿ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss