ಕೊರೋನಾ ಹೆಚ್ಚಳ: ಮತ್ತೆ ಮಾಸ್ಕ್ ಕಡ್ಡಾಯ ಎಂದ ತಮಿಳುನಾಡು ಸರ್ಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು,ಈ ಹಿನ್ನೆಲೆ ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶ ಬಳಿಕ ತಮಿಳುನಾಡು ಸರ್ಕಾರವು ರಾಜ್ಯದಲ್ಲಿ ಮಾಸ್ಕ್ ಧರಿಸುವಿಕೆಯನ್ನು ಕಡ್ಡಾಯಗೊಳಿಸಿದೆ.
ಈ ಸಂಬಂಧ ಶುಕ್ರವಾರ ಆದೇಶ ಹೊರಡಿಸಿರುವ ತಮಿಳುನಾಡು ಸರ್ಕಾರ ಮಾಸ್ಕ್ ಕಡ್ಡಾಯ ನಿಯಮ ಉಲ್ಲಂಘಿಸಿದರೆ500 ರೂಪಾಯಿ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಿದೆ.
ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳನ್ನು ಪರಿಗಣಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಮಿಳುನಾಡು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜೆ ರಾಧಾಕೃಷ್ಣನ್ ಅವರು ಹೇಳಿದ್ದಾರೆ.
ತಮಿಳುನಾಡಿನಲ್ಲಿ ಕೂಡ ಕಳೆದೆರಡು ದಿನಗಳಿಂದ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಹೆಚ್ಚಳವಾಗಿದೆ.
ಕೋವಿಡ್ ಸೋಂಕುಗಳ ಸಂಖ್ಯೆಯಲ್ಲಿ ಇಳಿಮುಖವಾದ ನಂತರ ಆರೋಗ್ಯ ಇಲಾಖೆಯು ಈ ಹಿಂದೆ ಹೊರಡಿಸಿದ್ದ ಮಾಸ್ಕ್ ಕಡ್ಡಾಯ ಆದೇಶವನ್ನು ಹಿಂಪಡೆದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!