ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಶಿವಮೊಗ್ಗ:
ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರ 26 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 66 ಜನರನ್ನು ಬಿಡುಗಡೆ ಮಾಡಲಾಗಿದೆ.
ಶಿವಮೊಗ್ಗದಲ್ಲಿ 18, ಭದ್ರಾವತಿ 00, ತೀರ್ಥಹಳ್ಳಿ 01, ಶಿಕಾರಿಪುರ 01, ಸಾಗರ 01, ಹೊಸನಗರ 03, ಸೊರಬ 00 ಹಾಗೂ ಹೊರ ಜಿಲ್ಲೆಯ 02 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ 243 ಸಕ್ರಿಯ ಪ್ರಕರಣಗಳಿವೆ. 5666 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 59 ಜನ, ಖಾಸಗಿ ಆಸ್ಪತ್ರೆಯಲ್ಲಿ 16 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 21 ಜನರಿದ್ದು, ಡಿಸಿಎಚ್ ಸಿಯಲ್ಲಿ 19 ಜನ ಹಾಗೂ 126 ಸೋಂಕಿತರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ