ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ ಸೋಂಕು

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ (ಮಾ.15) ಮೂವರಿಗೆ ಕೊರೋನಾ ಸೋಂಕು ದೃಢ ಪಟ್ಟಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಇತ್ತೀಚಿಗೆ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಒಂದಂಕೆಯಲ್ಲಿ ಮುಂದುವರಿದಿದೆ.
ಮಂಗಳವಾರ ಇಬ್ಬರು ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ ಒಟ್ಟು 1,33,584 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಮಂಗಳವಾರ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,849 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ ಸಕ್ರಿಯ ಪ್ರಕರಣಗಳು ಎರಡಂಕೆಗಳಿಗೆ ಇಳಿದಿದೆ. ಮಂಗಳವಾರ 22 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇ.0.26ರಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!