Wednesday, June 29, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಇಂದು 646 ಮಂದಿಗೆ ಕೊರೋನಾ ಸೋಂಕು: 557 ಜನರು ಗುಣಮುಖ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………

ಹೊಸ ದಿಗಂತ ವರದಿ,ಕಾಸರಗೋಡು:

ಜಿಲ್ಲೆಯಲ್ಲಿ ಸೋಮವಾರ 646 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 628 ಜನರಿಗೆ ಸಂಪರ್ಕದ ಮೂಲಕ ವೈರಸ್ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 557 ಮಂದಿ ಸೋಂಕುಮುಕ್ತರಾದರು. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 9931 ಜನರಿಗೆ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 9202 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ರಾಜ್ಯದಲ್ಲಿ 13,206 ಜನರು ಗುಣಮುಖರಾದರು.
ಕೇರಳದ ಜಿಲ್ಲೆಗಳ ಪೈಕಿ ಮಲಪ್ಪುರಂ ಜಿಲ್ಲೆಯಲ್ಲಿ 1615, ಕಲ್ಲಿಕೋಟೆ 1022, ತೃಶೂರು 996, ಎರ್ನಾಕುಳಂ 921, ಪಾಲಕ್ಕಾಡು 846, ಕೊಲ್ಲಂ 802, ತಿರುವನಂತಪುರ 700, ಕಣ್ಣೂರು 653, ಕಾಸರಗೋಡು 646, ಆಲಪ್ಪುಳ 613, ಕೋಟ್ಟಾಯಂ 484, ವಯನಾಡು 247, ಪತ್ತನಂತ್ತಿಟ್ಟ 239, ಇಡುಕ್ಕಿ ಜಿಲ್ಲೆಯಲ್ಲಿ 147 ಜನರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಮಧ್ಯೆ ಕೊರೋನಾ ವೈರಸ್ ಬಾಧಿಸಿ ಕೇರಳದಲ್ಲಿ ಸೋಮವಾರ 58 ಮಂದಿ ಮೃತಪಟ್ಟರು. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಒಟ್ಟು 15,408 ಜನರು ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss