ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 43 ಮಂದಿಗೆ ಕೊರೋನಾ ಸೋಂಕು

ಹೊಸದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಸೋಮವಾರ 43 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 35 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 32 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಮೂವರು ಸಾವಿಗೀಡಾದರು.
ಕೇರಳದಲ್ಲಿ 2560 ಹೊಸ ಪ್ರಕರಣ
ಕೇರಳದಲ್ಲಿ ಸೋಮವಾರ ಹೊಸದಾಗಿ 2560 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 2339 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 2150 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 30 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಭಾನುವಾರ ಶೇಕಡಾ 5.58 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!